ಏಕವಚನದಲ್ಲಿ ವಾಗ್ದಾಳಿ – ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ ಪ್ರತಾಪ್ ಸಿಂಹ – Vishwanews24

Featured, ರಾಜ್ಯ ನ್ಯೂಸ್

ಏಕವಚನದಲ್ಲಿ ವಾಗ್ದಾಳಿ – ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ ಪ್ರತಾಪ್ ಸಿಂಹ

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ.

ದೇಹ ಸದೃಢವಾಗಿಸುತ್ತದೆ ಎಂದು 39 ನಾಣ್ಯಗಳು ಮತ್ತು 37 ಅಯಸ್ಕಾಂತ  ನುಂಗಿದ ವ್ಯಕ್ತಿ – Vishwanews24

ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂದು ಏಕವಚನದಲ್ಲಿ ಮಾತನಾಡಿದ್ದಾರೆ ಎಂಬುದಾಗಿ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

Leave a Reply