ಏಪ್ರಿಲ್ 1 ರಿಂದ ಹೊರ ರಾಜ್ಯದಿಂದ ಬೆಂಗಳೂರಿಗೆ ಪ್ರವೇಶಿಸುವವರಿಗೆ RT-PCR ನೆಗೆಟಿವ್ ವರದಿ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್ -Vishwanews24
ಏಪ್ರಿಲ್ 1 ರಿಂದ ಹೊರ ರಾಜ್ಯದಿಂದ ಬೆಂಗಳೂರಿಗೆ ಪ್ರವೇಶಿಸುವವರಿಗೆ RT-PCR ನೆಗೆಟಿವ್ ವರದಿ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್ -Vishwanews24
ಬೆಂಗಳೂರು: ಏಪ್ರಿಲ್ 1ರಿಂದ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬರುವರು ಋಣಾತ್ಮಕ ಆರ್ ಟಿ-ಪಿಸಿಆರ್ ಪ್ರಮಾಣ ಪತ್ರವನ್ನು ಹೊಂದಿರಬೇಕಾಗಿರುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.
ಇದೇ ವೇಳೆ ಅವರು ಮಾತನಾಡಿ, ‘ಮುಂದಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂದ ಹಾಗೇ ಈ ನಿಯಮವು ಬೆಂಗಳೂರಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ಉಳಿದ ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎಂದು ಅವರು ಇದೇ ವೇಳೆ ಹೇಳಿದ್ರು. ರಾಜ್ಯದ ಹೊರಗಿನಿಂದ ಬರುವವರು ಆರ್‌ಟಿ-ಪಿಸಿಆರ್ ನಕಾರಾತ್ಮಕ ಪ್ರಮಾಣಪತ್ರವನ್ನು ಹೊಂದಿರಬೇಕು ಎನ್ನುವದರ ಬಗ್ಗೆ ಬಿಬಿಎಂಪಿ ಆಯುಕ್ತರು ಶೀಘ್ರದಲ್ಲೇ ಈ ಕುರಿತು ಆದೇಶ ಹೊರಡಿಸಲಿದ್ದಾರೆ ‘ಎಂದು ಸುಧಾಕರ್ ಹೇಳಿದರು.
ಇದನ್ನೂ ಓದಿ : ಬ್ಯಾಂಕ್ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24
