ಐಎಂಎ ಬಹುಕೋಟಿ ವಂಚನೆ ಪ್ರಕರಣ : ಜಮೀರ್‌ ಹಾಗೂ ರೋಷನ್ ಬೇಗ್ ಗೆ ಎಸ್​ಐಟಿ ನೋಟಿಸ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ಇಬ್ಬರೂ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದ್ದಾರೆ.

ಐಎಂಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್​ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಚುರುಕುಗೊಳಿಸಿದ್ದು, ಇತ್ತ ವಿಶೇಷ ತನಿಖಾ ತಂಡ(ಎಸ್‍ಐ) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ರೋಷನ್ ಬೇಗ್‍ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಜು.29 ರಂದು ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಶಾಸಕರಿಬ್ಬರಿಗೆ ಸೂಚಿಸಿದ್ದಾರೆ. ಐಎಂಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್​ ಜೊತೆ ಈ ಇಬ್ಬರೂ ಶಾಸಕರು ವ್ಯವಹಾರ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ.

ಈ ನಡುವೆ ಐಎಂಎ ಸಂಸ್ಥೆಯ ಲೆಕ್ಕ ಪರಿಶೋಧಕ ಆಗಿದ್ದ ಇಕ್ಬಾಲ್ ಖಾನ್‍ರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಕಂಪನಿಯ ಐಟಿ ರಿಟನ್ಸ್​ನಲ್ಲಿ ಆದಾಯ ತೆರಿಗೆ ಇಲಾಖೆಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಇಕ್ಬಾಲ್​​​ ರನ್ನು ಬಂಧಿಸಲಾಗಿದೆ. ಆರೋಪಿ ಇಕ್ಬಾಲ್​​​ ಖಾನ್​​​​​​​, ಮನ್ಸೂರ್​​ ಖಾನ್​​ ಜತೆ ಸೇರಿ ಅನೇಕ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದ ಎಂಬುದು ಎಸ್​ಐಟಿ ಅಧಿಕಾರಿಗಳಿಗೆ ವಿಚಾರಣೆ ವೇಳೆ ತಿಳಿದು ಬಂದಿದೆ.