ಐಸಿಸಿಯ ನೂತನ ಟೆಸ್ಟ್ ಆಲ್‍ರೌಂಡರ್ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ ರವೀಂದ್ರ ಜಡೇಜಾ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಐಸಿಸಿಯ ನೂತನ ಟೆಸ್ಟ್ ಆಲ್‍ರೌಂಡರ್ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ ರವೀಂದ್ರ ಜಡೇಜಾ – Vishwanews24

ದುಬೈ: ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ ಐಸಿಸಿಯ ನೂತನ ಟೆಸ್ಟ್ ಆಲ್‍ರೌಂಡರ್ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಇಂದು ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ‍್ಯಾಂಕಿಂಗ್‌ನ ಆಲ್‍ರೌಂಡರ್ ವಿಭಾಗದಲ್ಲಿ ಜಡೇಜಾ 406 ಅಂಗಳೊಂದಿಗೆ ನಂಬರ್ 1 ಸ್ಥಾನ ಪಡೆದಿದ್ದಾರೆ. ಜಡೇಜಾ ಬಳಿಕ ಜೇಸನ್ ಹೋಲ್ಡರ್ ಇದ್ದು, 382 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಜಡೇಜಾ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಬ್ಯಾಟಿಂಗ್‍ನಲ್ಲಿ 175 ರನ್ ಮತ್ತು ಬೌಲಿಂಗ್‍ನಲ್ಲಿ 9 ವಿಕೆಟ್ ಕಿತ್ತು ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಬಳಿಕ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡು ನಂಬರ್ 1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ ಜೇಸನ್ ಹೋಲ್ಡರ್ 2021ರ ಫೆಬ್ರವರಿ ಬಳಿಕ ಆಲ್‍ರೌಂಡರ್ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದರು. ಇದೀಗ ಜಡೇಜಾ ನಂಬರ್ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ : ಪ್ರಿಯಾಂಕ್ ಖರ್ಗೆ – Vishwanews24

Leave a Reply