ಕಂಚಿನಡ್ಕ ಟೋಲ್ ಗೇಟ್ ಪ್ರತಿಭಟನೆಗೆ ಬೆಂಬಲ : ಜಿತೇಂದ್ರ ಶೆಟ್ಟಿ ಉದ್ಯಾವರ – vishwanews24
ಕಂಚಿನಡ್ಕ ಟೋಲ್ ಗೇಟ್ ಪ್ರತಿಭಟನೆಗೆ ಬೆಂಬಲ – ಜಿತೇಂದ್ರ ಶೆಟ್ಟಿ ಉದ್ಯಾವರ
ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ಗೇಟ್ ರದ್ದು ಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಆಗಸ್ಟ್ ೨೪ ರಂದು ನಡೆಯುವ ಬೃಹತ್ ಪ್ರತಿಭಟನೆಗೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಉದ್ಯಾವರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
