ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಅಂದಾಜು 10-15 ಲಕ್ಷ ರೂ. ನಷ್ಟ – vishwanews24
ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; 10-15 ಲಕ್ಷ ರೂ. ನಷ್ಟ
ಉಡುಪಿ: ಕಾಪು ತಾಲೂಕಿನ ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿರುವ ತೆಂಗಿನಕಾಯಿ ಸಂಸ್ಕರಣಾ ಹಾಗೂ ಸಂಗ್ರಹ ಘಟಕದಲ್ಲಿ ಶನಿವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, ಅಂದಾಜು 10-15 ಲಕ್ಷ ರೂ. ನಷ್ಟ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟಕದೊಳಗೆ ಸಂಗ್ರಹಿಸಿಡಲಾಗಿದ್ದ ಅಪಾರ ಪ್ರಮಾಣದ ತೆಂಗಿನಕಾಯಿಗಳಿಗೆ ಬೆಂಕಿ ವೇಗವಾಗಿ ವ್ಯಾಪಿಸಿದೆ.
ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ – vishwanews24
ಸ್ಥಳೀಯರಿಂದ ಮಾಹಿತಿ ನೀಡಿದ ಬಳಿಕ ಉಡುಪಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದು, ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡುವುದನ್ನು ತಡೆಯಲಾಗಿದೆ.
ಈ ಘಟಕವು ನಳಿನಿ ಪುಷ್ಪಲತಾ ಸಾಲಿಯಾನ್ ಅವರ ಮಾಲೀಕತ್ವದಲ್ಲಿದ್ದು, ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ. ಘಟಕದಲ್ಲಿ ಸಂಗ್ರಹಿಸಿಡಲಾಗಿದ್ದ ದೊಡ್ಡ ಪ್ರಮಾಣದ ತೆಂಗಿನಕಾಯಿಗಳು ಬೆಂಕಿಗೆ ಆಹುತಿಯಾಗಿವೆ.
ಪ್ರಾಥಮಿಕ ಅಂದಾಜಿನ ಪ್ರಕಾರ, ಸುಮಾರು 10 ಲಕ್ಷದಿಂದ 15 ಲಕ್ಷ ಮೌಲ್ಯದ ತೆಂಗಿನಕಾಯಿಗಳು ಬೆಂಕಿಯಿಂದ ಹಾನಿಗೊಳಗಾಗಿರುವ ಸಾಧ್ಯತೆಯಿದೆ. ಆದರೆ, ಒಟ್ಟು ನಷ್ಟದ ನಿಖರ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಹಾಗೂ ಸಂಭವಿಸಿರುವ ಒಟ್ಟು ನಷ್ಟವನ್ನು ಅಂದಾಜಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.
