ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ
ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಪವಿತ್ರ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಭಕ್ತರನ್ನು ನದಿಯತ್ತ ತೆರಳದಂತೆ ದೇವಸ್ಥಾನ ಆಡಳಿತ ಹಾಗೂ ಸ್ಥಳೀಯ ಆಡಳಿತ ಸೂಚನೆ ನೀಡಿದೆ.
ಸ್ನಾನಘಟ್ಟ ಬಳಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಪರ್ಯಾಯ ವ್ಯವಸ್ಥೆಯಾಗಿ ದೊಡ್ಡ ಡ್ರಮ್ಗಳಲ್ಲಿ ನೀರು ತುಂಬಿಸಿ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಿತ್ಯ ಸಾವಿರಾರು ಭಕ್ತರು ಯಾವುದೇ ತೊಂದರೆಯಾಗದಂತೆ ದೇವರ ದರ್ಶನ ಪಡೆಯುತ್ತಿದ್ದಾರೆ.
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24
ನದಿಯಲ್ಲಿ ನೀರಿನ ಹರಿವು ತೀವ್ರವಾಗಿರುವುದರಿಂದ ಪೊಲೀಸರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯ ನೀರಿನ ಮಟ್ಟದ ಮೇಲೆ ಆಡಳಿತ ನಿರಂತರ ನಿಗಾ ಇರಿಸಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಪರ್ಯಾಯ ಸ್ನಾನ ವ್ಯವಸ್ಥೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.
