ಕಡಬ: ರೇಬಿಸ್ ವೈರಸ್ ಸೋಂಕಿಗೆ ವಿದ್ಯಾರ್ಥಿನಿ ಬಲಿ -Vishwanews24

Featured, ದಕ್ಷಿಣ ಕನ್ನಡ

ಕಡಬ: ರೇಬಿಸ್ ವೈರಸ್ ಸೋಂಕಿಗೆ ವಿದ್ಯಾರ್ಥಿನಿ ಬಲಿ -Vishwanews24

ಕಡಬ : ರೇಬಿಸ್‌ ವೈರಸ್‌ಗೆ ತುತ್ತಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾಳೆ.

ಆಲಂಕಾರು ಗ್ರಾಮದ ಕೆದಿಲ ವರ್ಗಿಸ್ ಎಂಬವರ ಪುತ್ರಿ ವಿನ್ಸಿ (17) ಮೃತ ಬಾಲಕಿ.

ವಿನ್ಸಿ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಗುರುವಾರ ಬೆಳಗ್ಗೆ ಈಕೆಗೆ ಏಕಾಏಕಿ ತಲೆನೋವು ಕಾಣಿಸಿಕೊಂಡಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಔಷಧ ತರಲಾಗಿತ್ತು. ಸಂಜೆಯ ವೇಳೆ ಮತ್ತೆ ತಲೆನೋವು ಉಲ್ಬಣಗೊಂಡಿದ್ದರಿಂದ ಆಕೆಯನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದ ನಂತರ ಅಲ್ಲಿದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವಿನ್ಸಿ ತಡರಾತ್ರಿ ಮೃತಪಟ್ಟಿದ್ದಾಳೆ.

ಸುಮಾರು ನಾಲ್ಕು ತಿಂಗಳ ಹಿಂದೆ ಆಲಂಕಾರು ಪೇಟೆ ಸೇರಿದಂತೆ ಮೃತಳ ಮನೆಯ ಸುತ್ತಮುತ್ತ ಹುಚ್ಚು ನಾಯಿಯೊಂದು ಕಾಣಿಸಿಕೊಂಡಿತ್ತು. ಈ ಸಂದರ್ಭ ಆಲಂಕಾರು ಪೇಟೆಯಲ್ಲಿರುವ ಬೀದಿನಾಯಿಗಳಿಗೆ ಹಾಗೂ ಇಬ್ಬರ ಮೇಲೆ ದಾಳಿ ನಡೆಸಿತ್ತು. ವಿನ್ಸಿ ಮನೆಯ ನಾಯಿಯೂ ಕೂಡಾ ಕೆಲವು ದಿನಗಳ ಹಿಂದೆ ರೇಬಿಸ್‌ಗೆ ಒಳಗಾಗಿ ಮೃತಪಟ್ಟಿತ್ತು. ಮನೆ ನಾಯಿಯಿಂದ ವೈರಸ್‌‌ ವಿದ್ಯಾರ್ಥಿನಿಗೂ ತಗುಲಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.