ಕಡಬ: ಶಾಲಾ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – ಇಂಜಿನಿಯರ್ , ಮುಖ್ಯಶಿಕ್ಷಕ ಅಮಾನತು : ಜಿಲ್ಲಾಧಿಕಾರಿ ಆದೇಶ – vishwanews24

Featured, ದಕ್ಷಿಣ ಕನ್ನಡ

ಕಡಬ: ಶಾಲಾ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – ಇಂಜಿನಿಯರ್ , ಮುಖ್ಯಶಿಕ್ಷಕ ಅಮಾನತು : ಜಿಲ್ಲಾಧಿಕಾರಿ ಆದೇಶ

ಕಡಬ :ಕಡಬ ತಾಲೂಕಿನ ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ಮಂಗಳವಾರ ನಡೆದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತುಗೊಳಿಸಿದ್ದಾರೆ.

ಮಣಿಪಾಲ: ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24

ಶಾಲಾ ಕಟ್ಟಡದ ಒಂದು ಭಾಗ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ಹೆಚ್ಚಿನ ವಿದ್ಯಾರ್ಥಿಗಳು ಆ ಸಮಯದಲ್ಲಿ ಶಾಲಾ ಮೈದಾನದಲ್ಲಿ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಏಳನೇ ತರಗತಿಯ ರಶ್ಮಿ, ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಎಂದು ಗುರುತಿಸಲಾಗಿದೆ.

ಶಾಲಾ ಕಟ್ಟಡದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅಗೆಯುವ ಯಂತ್ರ ಬಳಸಿ ಟ್ರೆಂಚ್ ತೋಡುತ್ತಿದ್ದ ವೇಳೆ ಕುಸಿತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು, ಆದರೆ ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಾದ ಮಂಕಿಪಾಕ್ಸ್ ಕಾಯಿಲೆ– ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ , ಸುತ್ತೋಲೆ ಪ್ರಕಟ – vishwanews24

ಕುಸಿದ ಕಟ್ಟಡವು ಸರಿಸುಮಾರು 50 ವರ್ಷಗಳಷ್ಟು ಹಳೆಯದಾಗಿದೆ ಮತ್ತು ಸರಿಯಾದ ಅಡಿಪಾಯವನ್ನು ಹೊಂದಿಲ್ಲ, ಇದು ಕುಸಿತಕ್ಕೆ ಕಾರಣವಾಗಿರಬಹುದು.ಕಟ್ಟಡದ ದುಸ್ಥಿತಿಯ ಅರಿವಿದ್ದರೂ ತರಾತುರಿಯಲ್ಲಿ ಕಾಮಗಾರಿ ಆರಂಭಿಸಿರುವುದು ಸ್ಥಳೀಯರು ಹಾಗೂ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

Leave a Reply