ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣು -Vishwanews24

Featured, ರಾಜ್ಯ ನ್ಯೂಸ್

ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣು -Vishwanews24

ಬೆಂಗಳೂರು: ಕನ್ನಡ ಕಿರುತೆರೆಗಳಲ್ಲಿ ನಟಿಸುತ್ತಿದ್ದ ನಟಿ ಸೌಜನ್ಯ ಇಂದು ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ನಟಿ ಸೌಜನ್ಯ(25) ಇಂದು ಬೆಳಗ್ಗೆ ಪಿಎಗೆ ತಿಂಡಿ ತರಲು ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಡೇತ್ ನೋಟ್‍ನಲ್ಲಿ ನನ್ನ ಸಾವಿಗೆ ನಾನೇ ಕಾರಣ, ಬೇರೆ ಯಾರೂ ಕಾರಣವಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಜನ್ಯ ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರದವರಾಗಿದ್ದು, ಕನ್ನಡದ ಚೌಕಟ್ಟು, ಫನ್ ಎಂಬ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕೋವಿಡ್ 19 ನಿಂದ ಚಿತ್ರರಂಗದ ಚಟುವಟಿಕೆ ಸ್ಥಗಿತಗೊಂಡು ಅವಕಾಶ ಸಿಗದ ಕಾರಣ ಖಿನ್ನತೆಗೆ ಒಳಗಾಗಿ ಸೌಜನ್ಯ ಆತ್ಮಹತ್ಯೆಗೆ ಶರಣಾರಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಪ್ರಯಾಣಿಕರ ಗಮನಕ್ಕೆ ; ರೈಲು ಸಂಚಾರ ಸಮಯದಲ್ಲಿ ಬದಲಾವಣೆ -Vishwanews24