ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ – Vishwanews24
ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ – Vishwanews24
ಬೆಂಗಳೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.
ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ನಟ ಪ್ರತೀ ದಿನ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಕೂಡ ಚಿಕಿತ್ಸೆ ಪಡೆದ ನಂತರವೂ ಚೆನ್ನಾಗಿದ್ದರು. ಆದರೆ ಮಧ್ಯೆರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ.
ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.
ಡಾ. ರಾಜ್ ಕುಮಾರ್ ಅವರ ‘ಪರಶುರಾಮ್’ ಚಿತ್ರದ ವಿಲನ್ ಆಗಿದ್ದ ಅಶೋಕ್ ರಾವ್, ಕನ್ನಡದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಶೋಕ್ ರಾವ್ ನಟಿಸಿದ್ದರು. ಪರಶುರಾಮ್ ಚಿತ್ರದಲ್ಲಿ ಅಣ್ಣಾವ್ರೇ ಕರೆದು ಖಳನಾಯಕನ ಪಾತ್ರ ಮಾಡಿಸಿದ್ದರಂತೆ. ಅಶೋಕ್ ಅವರು ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಸದ್ಯ ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಎಲ್ಲಾ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸುವುದು ಆತ್ಮನಿರ್ಭರ ಯೋಜನೆಯ ಗುರಿ : ಪ್ರಧಾನಿ ಮೋದಿ – Vishwanews24
