ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ‘ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ’ ಎಂಬ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ‘ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ರಾಜ್ಯ ದಲ್ಲಿ ಕನ್ನಡವೇ ಅಧಿಕೃತ ಭಾಷೆ’ ಎಂದು ಬಿಜೆಪಿಯವರೇ ಆದ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿರುವುದು ವಿಭಿನ್ನ ಚರ್ಚೆ ಹುಟ್ಟು ಹಾಕಿದೆ.

‘ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ’ ಎನ್ನುವ ಮೂಲಕ ಯಡಿಯೂರಪ್ಪ ಪರೋಕ್ಷ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಹಿಂದಿ ದಿವಸ್‌’ ಆಚರಣೆಯ ಸಂದರ್ಭದಲ್ಲಿ ‘ಒಂದು ದೇಶ, ಒಂದು ಭಾಷೆ’ ಎಂದು ಪ್ರತಿಪಾದಿಸಿದ್ದರು.