ಕರಂದ್ಲಾಜೆಗೆ ಇನ್ನೊಂದು ಭಾರಿ ಅವಕಾಶ ನೀಡಬಾರದು , ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ : ಉಡುಪಿ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು – Vishwanews24
ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಭಾರಿ ಅವಕಾಶ ನೀಡಬಾರದು , ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ : ಉಡುಪಿ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ನಡೆಯುತ್ತಿರುವ ಅಭಿಯಾನ ಮುಂದುವರೆದಿದ್ದು. ಸಾಮಾಜಿಕ ಜಾಲತಾಣ ಬಳಿಕ ಇದೀಗ ಬಿಜೆಪಿ ಕಾರ್ಯಕರ್ತರು ಬಿದಿಗಳಿದು ಪ್ರತಿಭಟನೆ ಪ್ರಾರಂಭಿಸಿದ್ದಾರೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಕಾರ್ಯಕರ್ತರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ಇವತ್ತು ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು.
ಕಾಪು: ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್ ಮೆನ್ ನ ಪರ್ಸ್ ಎಗರಿಸಿ ಲಕ್ಷಾಂತರ ರೂ. ದರೋಡೆ – Vishwanews24
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು.ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಭಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಈ ಬಾರಿ ಕೂಡ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ.ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ.ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
