ಕರಾವಳಿಗೆ ರೆಡ್ ಅಲರ್ಟ್ : ಭಾರೀ ಮಳೆ ಸಾಧ್ಯತೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಕರಾವಳಿಗೆ ರೆಡ್ ಅಲರ್ಟ್ : ಭಾರೀ ಮಳೆ ಸಾಧ್ಯತೆ

ಮಂಗಳೂರು :  ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 5ರ ಬೆಳಗ್ಗೆ 8.30ರಿಂದ ಜು. 6ರ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 8ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply