ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ : ಹವಾಮಾನ ಇಲಾಖೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ : ಹವಾಮಾನ ಇಲಾಖೆ

ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗೆ  ಯೆಲ್ಲೊ ಅಲರ್ಟ್‌ ಘೋಷಣೆ

ತಮಿಳುನಾಡಿನಲ್ಲಿ ಭಾರೀ ಮಳೆ – ಶಾಲೆಗಳಿಗೆ ರಜೆ

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದ್ದು, ಮೊದಲ ದಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್‌- ವಿದ್ಯಾರ್ಥಿ ಸಾವು..vishwanews24

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ನಿನ್ನೆಯೂ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ

ತಮಿಳುನಾಡಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಅಂತ್ಯ ಕಾಣುವ ಲಕ್ಷಣಗಳೇ ಕಾಣುತ್ತಿಲ್ಲ. ಇಂದು ಕೂಡ ಭಾರೀ ಮಳೆಯಿಂದಾಗಿ ಕುನ್ನೂರು ಮತ್ತು ಕೋಟಗಿರಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ನಗರದ 15 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ: ಎಸ್ಪಿ ಡಾ.ಅರುಣ್ – vishwanews24

Leave a Reply