ಕರಾವಳಿಯಲ್ಲಿ ಜಲ್ಲಿ – ಶಿಲೆಕಲ್ಲಿ ಸಾಗಾಟ ನಿರ್ಬಂಧ ತೆರವುಗೊಳಿಸಲು ಶಾಸಕ ವೇದವ್ಯಾಸ್ ಕಾಮತ್, ರಘುಪತಿ ಭಟ್ ನೇತೃತ್ವದಲ್ಲಿ ಸಿಎಂ ಭೇಟಿ -Vishwanews24

Featured, ರಾಜ್ಯ ನ್ಯೂಸ್

ಕರಾವಳಿಯಲ್ಲಿ ಜಲ್ಲಿ – ಶಿಲೆಕಲ್ಲಿ ಸಾಗಾಟ ನಿರ್ಬಂಧ ತೆರವುಗೊಳಿಸಲು ಶಾಸಕ ವೇದವ್ಯಾಸ್ ಕಾಮತ್, ರಘುಪತಿ ಭಟ್ ನೇತೃತ್ವದಲ್ಲಿ ಸಿಎಂ ಭೇಟಿ -Vishwanews24

ಬೆಂಗಳೂರು: ಜಲ್ಲಿಕಲ್ಲು ಹಾಗೂ ಶಿಲೆಗಳ ಸಾಗಾಟಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಇಂದು ಶಾಸಕ ವೇದವ್ಯಾಸ್ ಕಾಮತ್, ಉಡುಪಿ ಶಾಸಕರಾದ ರಘುಪತಿ ಭಟ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕ್ವಾರಿ ಮಾಲಕರು, ಕ್ರಷರ್ ಮಾಲಕರು, ಕಟ್ಟಡ‌ ಸಾಮಾಗ್ರಿ ಲಾರಿ ಟೆಂಪೋ ಮಾಲಕರ ಸಂಘದ ಪದಾಧಿಕಾರಿಗಳ ನಿಯೋಗವು ಗಣಿ ಮತ್ತು ಭೂವಿಜ್ಞಾನ ಸಚಿವರಾಗ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲುಗಳ ಸಾಗಾಟಕ್ಕೆ ನಿರ್ಬಂಧ ಹೇರಿರುವ ಕಾರಣ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿರುವ ಕುರಿತು ಚರ್ಚೆ ನಡೆಯಿತು.

ಇದನ್ನೂ ಓದಿ : ಸಿಡಿ ಪ್ರಕರಣ : ಇಂತಹ 10 ವೀಡಿಯೋ ಬರಲಿ ನಾನು ಹೆದರಲ್ಲ , ಕಾನೂನು ಹೋರಾಟ ನಡೆಸಿ ನಿರ್ದೋಷಿ ಆಗಿ ಬರುತ್ತೇನೆ : ರಮೇಶ್ ಜಾರಕಿಹೊಳಿ -Vishwanews24

ಜಲ್ಲಿಕಲ್ಲು ಸಿಗದೆ ಅನೇಕ ಕಾಮಗಾರಿಗಳು ಸ್ಥಗಿತವಾಗಿದೆ. ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಇದರಿಂದ ವಿಪರೀತ ಸಮಸ್ಯೆಯಾಗುತ್ತಿದೆ. ಹಾಗಾಗಿ ನಿರ್ಬಂಧ ತೆರವುಗೊಳಿಸುವಂತೆ ನಿಯೋಗವು ಗಣಿ ಹಾಗೂ ಭೂ ವಿಜ್ಞಾನ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸಮಸ್ಯೆ ಆಲಿಸಿದ ಸಚಿವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿಯೋಗದೊಂದಿಗೆ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸಿ ಸಮಸ್ಯೆಯ ಕುರಿತು ಗಮನ ಸೆಳೆದರು.

ಸಮಸ್ಯೆಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲು ಸಾಗಾಟಕ್ಕೆ ಅವಕಾಶ ನೀಡುವ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿಯ ಜೀವ ಹಾಗೂ ಮಾನ ರಕ್ಷಣೆಗೆ ಬದ್ಧನಾಗಿದ್ದೇನೆ : ರಮೇಶ್ ಕುಮಾರ್ -Vishwanews24