ಕರಾವಳಿಯಲ್ಲಿಕಾಂಗ್ರೆಸ್‌ಗೆ ಹೀನಾಯ ಸೋಲು: ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಗೋ ಬ್ಯಾಕ್ ಅಭಿಯಾನ – vishwanews24

Featured, ಉಡುಪಿ

ಕರಾವಳಿಯಲ್ಲಿಕಾಂಗ್ರೆಸ್‌ಗೆ ಹೀನಾಯ ಸೋಲು: ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಗೋ ಬ್ಯಾಕ್ ಅಭಿಯಾನ

ಉಡುಪಿ: ಲೋಕಸಭಾ ಫಲಿತಾಂಶ ಬೆನ್ನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಉಡುಪಿಯ ಕೈ ಕಾರ್ಯಕರ್ತರು ʼಗೋ ಬ್ಯಾಕ್‌ʼ ಅಭಿಯಾನ ನಡೆಸುತ್ತಿದ್ದಾರೆ.

ಮಂಗಳೂರು : ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ ; ಇದು ಅಂತ್ಯವಲ್ಲ, ಆರಂಭ : ಪದ್ಮರಾಜ್ – vishwanews24

ಸಮಸ್ಯೆ ಆದಾಗ ನೀವು ಬರೋದೇ ಇಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಕಾರ್ಯವೈಖರಿ ವಿರುದ್ಧ ಅಸಮಾಧಾನ ಹೊರಹಾಕಿರುವ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ.

ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನರೇಂದ್ರ ಮೋದಿ – vishwanews24

Leave a Reply