ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ : ಶೂನ್ಯ ಫಲಿತಾಂಶವಿಲ್ಲದೆ ದಾಖಲೆ ಬರೆದ ಸರ್ಕಾರಿ ಶಾಲೆಗಳು -Vishwanews24
ಬೆಂಗಳೂರು,: ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆಯು 2019ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ.
ಯಾವುದೇ ಸರ್ಕಾರಿ ಶಾಲೆಗಳು ಶೂನ್ಯ ಫಲಿತಾಂಶವನ್ನು ಪಡೆಯದೆ ಜನರು ಹುಬ್ಬೇರಿಸುವಂತೆ ವಿದ್ಯಾರ್ಥಿಗಳು ಮಾಡಿದ್ದಾರೆ. ಇದು ಕರ್ನಾಟಕದ ಪಾಲಿಗೆ ಹೆಮ್ಮೆಯ ವಿಷಯವಾಗಿದೆ.
ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಆನೇಕಲ್ನಸೆಂಟ್ ಫಿಲೋಮಿನಾ ಶಾಲೆಯ ಸೃಜನಾ ಡಿ. ಮತ್ತು ಕುಮಟಾದ ನಾಗಾಂಜಲಿ ನಾಯಕ್ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಪಡೆದಿದ್ದಾರೆ.
ಯಾವ ಸರ್ಕಾರಿ ಶಾಲೆಯೂ ಕೂಡ ಶೂನ್ಯ ಫಲಿತಾಂಶ ಪಡೆಯದೆ ದಾಖಲೆ ನಿರ್ಮಿಸಿವೆ. ಕಳೆದ ಬಾರಿ 6 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿತ್ತು. ಒಟ್ಟು 593 ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿವೆ. ಅನುದಾನಿತ ಶಾಲೆಗಳ ಪೈಕಿ 130 ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ 9 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇನ್ನು 903 ಅನುದಾನರಹಿತ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ 37 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ..
2019ನೇ ಸಾಲಿನಲ್ಲಿ ಶೇ 73.70ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶವನ್ನು ಪಡೆದಿದ್ದಾರೆ.
