ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ -vishwanews24

Featured, ರಾಜ್ಯ ನ್ಯೂಸ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು,.

ಮೋದಿ ಸರಕಾರಕ್ಕೆ ಯಶಸ್ವೀ 12 ವರ್ಷ: ಜೂ.5ರಿಂದ 21ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಅಭಿಯಾನ – vishwanews24

Leave a Reply