ಕಲಬುರಗಿ : ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – vishwanews24

Featured, ರಾಜ್ಯ ನ್ಯೂಸ್

ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

ಕಲಬುರಗಿ: ಇಲ್ಲಿನ ಏರ್‌ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಿರುವ ಪ್ರಸಂಗವೊಂದು ನಡೆದಿದೆ.

ಏರ್‌ಪೋರ್ಟ್ ಮೇಲ್ ಐಡಿಗೆ ಅನಾಮಧೇಯ ವ್ಯಕ್ತಿಯಿಂದ ಮೇಲ್ ಬಂದಿದ್ದು, ಏರ್‌ಪೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಷಯ ಬಯಲಾಗುತ್ತಿದ್ದಂತೆಯೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿದ್ದಾರೆ.

ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ – vishwanews24

ಬೆದರಿಕೆ ಮೇಲ್‍ನಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರಯಾಣಿಕರ ಬ್ಯಾಗ್‍ಗಳ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಏರ್‌ಪೋರ್ಟ್ ನ ಇಂಚಿಂಚು ಸ್ಥಳ ಪರಿಶೀಲನೆ ಪೊಲೀಸರು ನಡೆಸುತ್ತಿದ್ದಾರೆ.

ಕಂದಾಯ ಸಚಿವ ಕೃಷ್ಣೆಬೈರೇಗೌಡ ಸೇರಿ ಹಲವು ಪ್ರಯಾಣಿಕರಿದ್ದ ವಿಮಾನವು ಇಂದು ಬೆಳಗ್ಗೆ 9:20ಕ್ಕೆ ಬೆಂಗಳೂರಿನಿಂದ ಕಲಬುರಗಿ ಏರ್‌ಪೋರ್ಟ್ ಗೆ ಆಗಮಿಸಿದೆ. ಇತ್ತ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್‌ಪೋರ್ಟ್ ಸಿಬ್ಬಂದಿ 20 ನಿಮಿಷ ಪ್ಯಾಸೆಂಜರ್ ಗಳನ್ನ ಇಳಿಸಲಿಲ್ಲ. ಏರ್‌ಪೋರ್ಟ್ ತಪಾಸಣೆ ಬಳಿಕವೇ ಅಧಿಕಾರಿಗಳು ಪ್ರಯಾಣಿಕರನ್ನು ಕೆಳಗಿಳಿಸಿದರು.

ರಷ್ಯಾದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಚರ್ಚ್‌ ಮೇಲೆ ದಾಳಿ : ಪಾದ್ರಿ,ನಾಗರಿಕರು, 15 ಪೊಲೀಸ್ ಅಧಿಕಾರಿಗಳ ಹತ್ಯೆ – vishwanews24

Leave a Reply