ಕಾಂಗ್ರೆಸ್ ಅವಧಿಯಲ್ಲಿ ಬಂಟ್ವಾಳದ ನೆಮ್ಮದಿ ಕೆಡಿಸಿದವರೇ ಬಿಜೆಪಿಯವರು :ರಮಾನಾಥ ರೈ – Vishwanews24
ಬಂಟ್ವಾಳ : ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ
ಬಂಟ್ವಾಳ : ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಅವರು ಬಿ.ಸಿ.ರೋಡ್ ಪರ್ಲಿಯಾದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.
ಕಳೆದ ಐದು ವರ್ಷದಲ್ಲಿ ಬಂಟ್ವಾಳ ಶಾಂತವಾಗಿದೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಅವಧಿಯಲ್ಲಿ ಬಂಟ್ವಾಳದ ನೆಮ್ಮದಿ ಕೆಡಿಸಿದವರೇ ಬಿಜೆಪಿಯವರು. ನಮ್ಮ ಅವಧಿಯಲ್ಲಿ ಚುನಾವಣೆಗೂ ಆರು ತಿಂಗಳಿರುವಾಗ ಗಲಭೆಗಳ ಸಂಚು ರೂಪಿಸಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿದ್ದರು. ಕೊಲೆ ಪ್ರಕರಣವೊಂದನ್ನು ಕಾಂಗ್ರೆಸ್ ನಾಯಕರ ತಲೆಗೆ ಕಟ್ಟಲು ನೋಡಿದ್ದರು. ಆದರೆ, ನಾಲ್ಕೇ ದಿನದಲ್ಲಿ ಆರೋಪಿಗಳು ಪತ್ತೆಯಾದಾಗ ಅವರು ಯಾರು ಆಗಿದ್ದರು ಎಂಬುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಅವರು ಸ್ಮರಿಸಿದರು.
ಭಜರಂಗದಳ ನಿಷೇಧ – ಮುಸ್ಲಿಂ ಮೀಸಲಾತಿ ಮರುಜಾರಿ : ಕಾಂಗ್ರೆಸ್ ಪ್ರಣಾಳಿಕೆ’ ಬಿಡುಗಡೆ – Vishwanews24
ಕಳೆದ ಐದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದಿರುವ ಇವರಿಗೆ ಮಾತನಾಡಲು ವಿಷಯಗಳು ಸಿಗುತ್ತಿಲ್ಲ. ಅದಕ್ಕೆ ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ. ನನ್ನ ನಾಮಪತ್ರ ಸಲ್ಲಿಕೆಗೆ ಮಂಜೇಶ್ವರದ ಶಾಸಕ ಆಗಮಿಸಿದ್ದಕ್ಕೆ ಬೇರೆ ಬಣ್ಣ ಕಟ್ಟಲು ನೋಡುತ್ತಿದ್ದಾರೆ. ಮಂಜೇಶ್ವರದ ಶಾಸಕ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಶಾಸಕರಾಗಿದ್ದು, ನನ್ನ ಮೇಲಿನ ಅಭಿಮಾನದಿಂದ ನಾಮಪತ್ರ ಸಲ್ಲಿಕೆಗೆ ಶುಭಕೋರಲು ಬಂದಿದ್ದರು. ಆದರೆ, ಬಿಜೆಪಿಗರು ಅದಕ್ಕೆ ಬೇರೆಯದೇ ಅರ್ಥ ಕಲ್ಪಿಸಿ, ಜನತೆಯ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ. ಜನತೆ ಬಿಜೆಪಿಯ ಬಂಡವಾಳವನ್ನು ಅರಿತಿದ್ದು, ವಾಮಮಾರ್ಗದಿಂದ ಅಧಿಕಾರ ಹಿಡಿಯಬಹುದು ಎಂಬ ಇವರ ಕನಸು ನುಚ್ಚು ನೂರಾಗಲಿದೆ ಎಂದು ರೈ ಭವಿಷ್ಯ ನುಡಿದರು.
ಭಜರಂಗದಳ ನಿಷೇಧ – ಮುಸ್ಲಿಂ ಮೀಸಲಾತಿ ಮರುಜಾರಿ : ಕಾಂಗ್ರೆಸ್ ಪ್ರಣಾಳಿಕೆ’ ಬಿಡುಗಡೆ – Vishwanews24
