ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ್ದು ರಿಜಿಸ್ಟರ್ ಮ್ಯಾರೇಜ್ : ಸಚಿವ ಜಮೀರ್ ಅಹ್ಮದ್

Featured, ಜಿಲ್ಲೆ

ಹಾಸನ : ನಮ್ಮ ಮೈತ್ರಿ ಸರ್ಕಾರ ಅಧಿಕೃತವಾಗಿ ಮಾಡಿಕೊಂಡಿರುವಂತಹ ರಿಜಿಸ್ಟರ್ ಮ್ಯಾರೇಜ್, ಇದರಲ್ಲಿ ಯಾವುದೇ ಲೋಪ ಇಲ್ಲ. 5 ವರ್ಷ ಸರ್ಕಾರ ಪೂರ್ಣಗೊಳಿಸುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಹಾಸನದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿಎಂ ಕುಮಾರಸ್ವಾಮಿಯನ್ನು ಕೆಳಗಿಳಿಸಿ ಸಿಎಂ ಆಗ್ತೀವಿ ಎಂದು ಯಾರು ಹೇಳಿಲ್ಲ. ಕುಮಾರಸ್ವಾಮಿ ಅಧಿಕಾರದ ಅವಧಿ ಮುಗಿದ ನಂತರ ಮತ್ತೊಮ್ಮೆ ಸಿಎಂ ಆಗುತ್ತೇವೆ ಎಂದು ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಈ ಬಾರಿ ಸಿಎಂ ಆಗ್ತಾರೆ ಎನ್ನುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಿದ್ದರಾಮಯ್ಯ ಸಿಎಂ ಆಗುವ ಅವಕಾಶ ತಪ್ಪಿ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದರು.