ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್ – vishwanews24
ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾದ ಜಗದೀಶ್ ಶೆಟ್ಟರ್
ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರ ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.
