ಕಾಂಗ್ರೆಸ್ ನವರು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡ್ತಾ ಬಂದಿದ್ದೇವೆ : ಡಿಕೆ ಶಿವಕುಮಾರ್ – Vishwanews24
ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ನೋಡಿ ಬಿಜೆಪಿ ಮತ್ತು ಜೆಡಿಎಸ್ ಗೆ ಭೀತಿ ಶುರುವಾಗಿದೆ
ಬೆಂಗಳೂರು: ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ನೋಡಿ ಬಿಜೆಪಿ ಮತ್ತು ಜೆಡಿಎಸ್ ಗೆ ಭೀತಿ ಶುರುವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಪ್ರಜಾಧ್ವನಿ ಯಾತ್ರೆಗೆ ಸೇರುತ್ತಿರುವ ಜನ ನೋಡಿದರೆ ಅದು ಸಾಬೀತಾಗುತ್ತಿದೆ. ಕಾಂಗ್ರೆಸ್ ನವರು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡ್ತಾ ಬಂದಿದ್ದೇವೆ ಎಂದರು.
ಸೋಮವಾರ ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ನಾನು, ಸಲೀಂ ಅಹ್ಮದ್, ಪರಮೇಶ್ವರ್ ಹಾಗೂ ನಾರಾಯಣ ಸ್ವಾಮಿ ಅವರು ಕಾಂಗ್ರೆಸ್ ಕಚೇರಿಯಿಂದ ತೆರಳುತ್ತಿದ್ದೇವೆ. ಉಳಿದ ನಾಯಕರು ನೇರವಾಗಿ ಅಲ್ಲಿಗೆ ಬರಲಿದ್ದಾರೆ.
ಇದಾದ ನಂತರ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಲ್ಲಿಂದ ಹೊಸದುರ್ಗ, ಹೊಳಲ್ಕೆರೆ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳುತ್ತೇವೆ. ನಂತರ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಅದಕ್ಕಾಗಿ ಎರಡು ಮೂರು ದಿನ ವಿರಾಮ ಇರಲಿದೆ. ನಂತರ ಮಂಡ್ಯ, ಮೈಸೂರು ಜಿಲ್ಲೆಯ ಕ್ಷೇತ್ರಗಳಿಗೆ ಭೇಟಿ ನೀಡುತ್ತೇವೆ ಎಂದು ತಿಳಿಸಿದರು.
ಮುಂಬಯಿ: ಜಾತಿಗಳು ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ : ಮೋಹನ್ ಭಾಗವತ್ – Vishwanews24
ಯಾತ್ರೆ ಕುರಿತು ಅನ್ಯ ಪಕ್ಷಗಳ ನಾಯಕರ ಟೀಕೆ ಬಗ್ಗೆ ಕೇಳಿದಾಗ ‘ಸಿದ್ದರಾಮಯ್ಯ ಅವರು ನಿರಂತರ ಪ್ರವಾಸ ವೇಳಾಪಟ್ಟಿ ನಿಗದಿ ಮಾಡಿಕೊಂಡಿದ್ದಾರೆ. ನಾವು ಇಲ್ಲಿ ಹತ್ತಿರದ ಕ್ಷೇತ್ರಗಳಿಗೆ ಬೆಂಗಳೂರಿನಿಂದ ತೆರಳುತ್ತಿದ್ದೇವೆ. ನಾವು ಎಲ್ಲೆ ಹೋದರು ನಮಗೆ ಜನರಿಂದ ಸಿಗುತ್ತಿರುವ ಬೆಂಬಲಕ್ಕೆ ಮಾಧ್ಯಮಗಳ ಕ್ಯಾಮೆರಾಗಳು ಸಾಕ್ಷಿ ಎಂದು ಹೇಳಿದರು.
ನಮಗೆ ಸಿಗುತ್ತಿರುವ ಜನ ಬೆಂಬಲದಿಂದ ಬಿಜೆಪಿ ಹಾಗೂ ದಳದವರಿಗೆ ಭೀತಿ ಎದುರಾಗಿದೆ. ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡಿಕೊಂಡು ಬಂದಿದ್ದೇವೆ. ಇತ್ತೀಚೆಗೆ ಬಿಜೆಪಿ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದೆ. ನಾವು ಈ ಯೋಜನೆಗೆ ಹಣ ನೀಡಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬಹುದಾಗಿತ್ತು.
ಮಲ್ಪೆ: ಬೋಟ್ ಹತ್ತುವಾಗ ಆಕಸ್ಮಿಕ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು – Vishwanews24
ಮೇಕೆದಾಟು ಯೋಜನೆಗೆ ಅನುಮತಿ ನೀಡಬಹುದಿತ್ತು. ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಾನು ನಿನ್ನೆ ತಾಂತ್ರಿಕ ತಂಡದ ಜತೆ ಸಭೆ ಮಾಡಿದ್ದೇನೆ. ನಾವು ರೈತರನ್ನು ರಕ್ಷಿಸುವ ಕಾರ್ಯಕ್ರಮ ಮಾಡುತ್ತೇವೆ. ಯಡಿಯೂರಪ್ಪ ಸೇರಿದಂತೆ ಯಾರೇ ನಮ್ಮ ಯಾತ್ರೆ ಪಂಚರ್ ಆಗಲಿದೆ ಎಂದು ಹೇಳಲಿ. ಅಂತಿಮವಾಗಿ ಯಾರು ಪಂಚರ್ ಆಗಲಿದ್ದಾರೆ ಎಂದು ಮತದಾರರು ತೀರ್ಮಾನ ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.
