ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಸ್ವಗ್ರಾಮದಲ್ಲಿ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ನೆರವೇರಿಸಿದ ಗ್ರಾಮಸ್ಥರು ಹಾಗೂ ಕುಟುಂಬಸ್ಥರು – Vishwanews24
ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಸ್ವಗ್ರಾಮದಲ್ಲಿ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ನೆರವೇರಿಸಿದ ಗ್ರಾಮಸ್ಥರು ಹಾಗೂ ಕುಟುಂಬಸ್ಥರು
ಬೆಳಗಾವಿ: ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ನೆರವೇರಿತು.
ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಸಂತೋಷ್ ಪಾಟೀಲ್ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇಂದು ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಅಂತ್ಯಕ್ರಿಯೆ ನೆರವೇರಿಸಿ ಎಂದು ಗ್ರಾಮಸ್ಥರು ಕೋರಿದರು. ಅಲ್ಲದೇ ಸಂಬಂಧಿಕರು ಕೂಡ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದರು. ನ್ಯಾಯಕ್ಕಾಗಿ ಹೋರಾಟ ಮಾಡೋಣ. ಬಾಕಿ ಬಿಲ್ ಮಂಜೂರಾತಿ ಹಾಗೂ ಕುಟುಂಬಸ್ಥರ ಪರಿಹಾರಕ್ಕೆ ಸರ್ಕಾರಕ್ಕೆ ಆಗ್ರಹಿಸೋಣ. ಆದರೆ ಅಂತ್ಯಕ್ರಿಯೆ ನೆರವೇರಿಸಲು ಅನುವು ಮಾಡಿಕೊಡುವಂತೆ ಕೋರಿದರು. ಇದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು. ಬಳಿಕ ಗ್ರಾಮದಲ್ಲಿ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತರಲಾಯಿತು. ಲಿಂಗಾಯತ ವಿಧಿವಿಧಾನಗಳ ಮೂಲಕ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪ್ರಧಾನಿ ಮನಸ್ಸು ಮಾಡಿದರೆ ನಾನೇ ಮುಂದಿನ ಮುಖ್ಯಮಂತ್ರಿ ಆಗುತ್ತೇನೆ : ಯತ್ನಾಳ್ – Vishwanews24
