ಕಾಂಗ್ರೆಸ್ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಗೆ ಐಟಿ ದಾಳಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಗುರುವಾರ ಬೆಳ್ಳಂಬೆಳಿಗ್ಗೆಯೇ ಐಟಿ ಅಧಿಕಾರಿಗಳು ಇಬ್ಬರು ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದಾರೆ.

ತುಮಕೂರಿನ ಡಾ.ಜಿ.ಪರಮೇಶ್ವರ್ ಮಾಲೀಕತ್ವದ ಸಿದ್ಧಾರ್ಥ್ ಇಂಜಿನಿಯರಿಂಗ್ ಕಾಲೇಜು ಮತ್ತು ಡಿಗ್ರಿ ಕಾಲೇಜುಗಳ ಮೇಲೆ ಐಟಿ ದಾಳಿ ನಡೆಸಿದೆ. ಇನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಾ.ಜಿ.ಪರಮೇಶ್ವರ್ ನಿವಾಸದ ಮೇಲೂ ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಮೂರು ಕಾರುಗಳಲ್ಲಿ ಬಂದ ಆಧಿಕಾರಿಗಳ ತಂಡ ಕಾಲೇಜಿನ ಸಿಬ್ಬಂದಿಯನ್ನು ಹೊರಗೆ ಕಳಿಸಿ ಕಾಲೇಜಿನಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಹಾಗೆಯೇ ಕೋಲಾರದಲ್ಲಿರುವ ಕಾಂಗ್ರೆಸ್ ಮುಖಂಡ ಆರ್.ಎಲ್ ಜಾಲಪ್ಪ ಅವರ ಒಡೆತನದ ಆರ್.ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನ ಮೇಲೆಯೂ ಐಟಿ ದಾಳಿಯಾಗಿದೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ನೆಲಮಂಗಲ ಪುರಸಭೆ ಜೆಡಿಎಸ್ ಸದಸ್ಯ ಶಿವಕುಮಾರ್ ನಿವಾಸದ ಮೇಲೂ ಐಟಿ ದಾಳಿಯಾಗಿದೆ.