ಕಾಂಗ್ರೆಸ್ ಶಾಸಕರ ವರ್ತನೆ ಒಪ್ಪಲು ಸಾಧ್ಯವಿಲ್ಲ, ನನ್ನ ಕೆಲಸ ಇಷ್ಟವಾಗದಿದ್ರೆ ನಾನು ರಾಜೀನಾಮೆ ಕೊಡಲು ಸಿದ್ಧನಿದ್ದೇನೆ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ – Vishwanews24
ಬೆಂಗಳೂರು:ಬಹಿರಂಗ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಂದು ವೇಳೆ ಇದೇ ವರ್ತನೆ ಪುನಾರವರ್ತನೆಯಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ಕೊಡಬೇಕಾಗುತ್ತದೆ ನಾನು ಕುರ್ಚಿಗೆ ಅಂಟಿಕೊಂಡಿಲ್ಲ, ಎಂದು ಸಿ.ಎಂ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಸಿದ್ದರಾಮಯ್ಯನವರೇ ನಮ್ಮ ನಾಯಕರು ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆ ಕುರಿತಂತೆ ಸೋಮವಾರ ಸುದ್ದಿಗಾರರು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ, ಕಾಂಗ್ರೆಸ್ ಪಕ್ಷ ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ, ಪದೇ, ಪದೇ, ಕಾಂಗ್ರೆಸ್ ನಾಯಕರು ಮಿತಿಮೀರಿ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಈ ಬಗ್ಗೆ ಕಾಂಗ್ರೆಸ್ ನಾಯಕರು, ಹೈಕಮಾಂಡ್ ಉತ್ತರ ಕೊಡಬೇಕು. ನಾನು ಅದಕ್ಕೆ ಉತ್ತರ ಕೊಡಲು ಸಮರ್ಪಕ ವ್ಯಕ್ತಿಯಲ್ಲ. ಆದರೆ ಪದೇ,ಪದೇ ಕಾಂಗ್ರೆಸ್ ಶಾಸಕರು ಹೀಗೆ ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಸಿಎಂ ಕುರ್ಚಿಯಿಂದ ಕೆಳಗಿಳಿಯಬೇಕಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.
#WATCH: Karnataka CM HD Kumaraswamy says "…If they want to continue with the same thing, I am ready to step down. They are crossing the line", when asked 'Congress MLAs are saying that Siddaramaiah is their CM'.' pic.twitter.com/qwErh4aEq4
— ANI (@ANI) January 28, 2019
