ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 12-13 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು, ನಾವು ಹೇಳಿಕೊಂಡಿರಲಿಲ್ಲ: ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಮೈಸೂರು,: ಭಾರತೀಯ ಜನತಾ ಪಕ್ಷವೂ ಉಗ್ರರ ವಿರುದ್ದ ಒಂದೋ, ಎರಡೋ ಸರ್ಜಿಕಲ್ ಸ್ಟ್ರೈಕ್ ಮಾಡಿ ಬೀಗುತ್ತಿದ್ದಾರೆ. ಮಾತ್ರವಲ್ಲದೇ ತಾವೇ ಸರ್ಜಿಕಲ್ ಸ್ಟ್ರೈಕ್ ನ್ನು ಮಾಡಿದಂತೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ನಮ್ಮ ಆಡಳಿತ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೆವು. ಆದರೆ ಈ ಬಗ್ಗೆ ನಮಗೆ ಪ್ರಚಾರ ಆಗತ್ಯವಿರಲಿಲ್ಲ. ಯುಪಿಎ ಅವಧಿಯಲ್ಲಿ ಎರಡು ಮೂರಲ್ಲ ಸುಮಾರು 12-13 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

 

ಮಾಜಿ ಪ್ರಧಾನಿ, ದಿವಂಗತೆ ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ? ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್? ದೇಶದ ರಕ್ಷಣೆ ವಿಚಾರವನ್ನು ಕಾಂಗ್ರೆಸ್ ಯಾವತ್ತೂ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಬಿಜೆಪಿಯವರು ಯಾವತ್ತೂ ಅಭಿವೃದ್ಧಿ ವಿಚಾರದಲ್ಲಿ ರೈತರ ವಿಚಾರದಲ್ಲಿ ಮತ ಕೇಳಿದ್ದಾರಾ? ಭಾವನಾತ್ಮಕ ವಿಚಾರ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು

ಬಿಜೆಪಿಯೂ ಎಂದಿಗೂ ಅಭಿವೃದ್ಧಿ ವಿಚಾರದಲ್ಲಿ ಮತ ಕೇಳಿಲ್ಲ, ರೈತರ ವಿಚಾರವನ್ನು ಮುಂದಿಟ್ಟುಕೊಂಡು ಮತ ಯಾಚಿಸಿಲ್ಲ. ಯಾಕೆಂದರೆ ಅವರಿಗೆ ಅಭಿವೃದ್ದಿ ಬೇಕಿಲ್ಲ. ಭಾವನಾತ್ಮಕ ವಿಚಾರಗಳನ್ನು ದಾಳವಾಗಿ ಬಳಸಿ ಮತ ಗಳಿಸೋದು ಬಿಜೆಪಿ ತಂತ್ರ ಎಂದು ಅಕ್ರೋಶ ವ್ಯಕ್ತಪಡಿಸಿದರು.