ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

Featured, ದಕ್ಷಿಣ ಕನ್ನಡ

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  ..

ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ ..

2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ..

ಮಂಗಳೂರು: ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ..

ಮಂಗಳೂರಿನಲ್ಲಿ ಮಂಗಳವಾರ ಪತ್ರಕರ್ತರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ಬಿಜೆಪಿಯಿಂದಲೂ ಕರೆಯ ನಿರೀಕ್ಷೆಯಲ್ಲಿದ್ದೇನೆ. ಬಿಜೆಪಿ ಆಹ್ವಾನ ನೀಡಿದರೆ ಅದರ ಬಗ್ಗೆಯೂ ಯೋಚಿಸಬಹುದು. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಯಾವುದೇ ನಿರ್ಧಾರ ಕೈಗೊಳ್ಳುತ್ತೇನೆ.

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

 

ಕಳೆದ ಚುನಾವಣೆ ಸಂದರ್ಭ ತನಗೆ ಅನ್ಯಾಯವಾಗಿದೆ. ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು. ಸಂಘದ ಹಿರಿಯರು ಹಾಗೂ ಬಿಜೆಪಿ ನಾಯಕರು ಯಾರೂ ತಮ್ಮೊಂದಿಗೆ ಮಾತನಾಡದೆ ಇದ್ದದ್ದು ಮನಸ್ಸಿಗೆ ನೋವುಂಟು ಮಾಡಿದೆ ಎಂದರು.

Leave a Reply