ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲಮನ್ನಾ ನಿಶ್ಚಿತ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಹೇಳಿದ್ದಾರೆ.
ರಾಹುಲ್ ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಪ್ರಚಾರದ ವೇಳೆ ಭರವಸೆ ನೀಡಿದ್ದರು.
ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಮತಯಾಚನೆ ಮಾಡಿತ್ತು. ಸಾಲಮನ್ನಾಕ್ಕಾಗಿ 3 ರಾಜ್ಯಗಳ ರೈತರು ಕಾಯುತ್ತಿದ್ದಾರೆ. ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ.

