ಕಾಂತಾರ ಕ್ಲೈಮ್ಯಾಕ್ಸ್ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್ ಶೆಟ್ಟಿ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ – VIshwanews24
ಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ, ಕ್ಲೈಮ್ಯಾಕ್ಸ್ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. : ರಿಷಬ್ ಶೆಟ್ಟಿ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ
ದೇಶಾದ್ಯಂತ ಹೊಸ ಸಂಚಲನ ಮೂಡಿಸಿದ ‘ಕಾಂತಾರ’ ಚಿತ್ರದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಬಾಲಿವುಡ್ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ‘ಕಾಂತಾರ’ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್ ಸಖತ್ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್ನಲ್ಲಿ ಕಂಡ ಬದಲಾವನೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್ ರೋಷನ್ ಪೋಸ್ಟ್ ಮಾಡಿದ್ದಾರೆ.

ಕನ್ನಡ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ‘ಕಾಂತಾರ’ ಚಿತ್ರದಿಂದ ಚಂದನವನದ ಚಾರ್ಮ್ ಹೆಚ್ಚಿದೆ. ರಜನಿಕಾಂತ್, ವಿವೇಕ್ ಅಗ್ನಿಹೋತ್ರಿ, ಕಂಗನಾ ರಣಾವತ್, ಅನುಷ್ಕಾ ಶೆಟ್ಟಿ, ಪ್ರಭಾಸ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಕೊಂಡಾಡಿದ್ದಾರೆ. ಅವರ ಸಾಲಿಗೆ ಹೃತಿಕ್ ರೋಷನ್ ಕೂಡ ಸೇರ್ಪಡೆ ಆಗಿದ್ದಾರೆ.
ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ಗಂಡಸಿ ನಾಗರಾಜ್ ಇನ್ನಿಲ್ಲ – Vishwanews24
