ಉಡುಪಿ : ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24

Featured, ಉಡುಪಿ

ಉಡುಪಿ: : ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಡುಪಿ:  ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ.

ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನ. 17ರಂದು ಕೊನೆಯುಸಿರೆಳೆದಿದ್ದಾರೆ.

 29 ವರ್ಷಗಳ ದಾಂಪತ್ಯ ಜೀವನ ಅಂತ್ಯ ; ವಿಚ್ಛೇದನ ಘೋಷಿಸಿದ ಎ.ಆರ್.ರೆಹಮಾನ್ ಪತ್ನಿ ಸಾಯಿರಾ ಬಾನು – vishwanews24

ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತಿದ್ದರು. ಇವರಿಗೆ ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.

ಅಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಅವರು ನ. 17ರಂದು ಮೃತಪಟ್ಟಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ -2024 ; ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ – vishwanews24

Leave a Reply