ಕಾಪು: ಒಳ ಹಾಗೂ ಹೊರ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ:  ಶಾಸಕ ಲಾಲಾಜಿ -Vishwanews24

Featured, ಉಡುಪಿ

ಕಾಪು: ಒಳ ಹಾಗೂ ಹೊರರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ:  ಶಾಸಕ ಲಾಲಾಜಿ -Vishwanews24

ಕಾಪು: ತಾಲೂಕಿನ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಆಕ್ಸಿಜನ್ ಘಟಕವನ್ನು ಕಾಪು ಶಾಸಕ ಲಾಲಾಜಿ ಮೆಂಡನ್ ಬುಧವಾರ ಉದ್ಘಾಟಿಸಿದರು.

ಈ ಸಂದರ್ಭ ಆರೋಗ್ಯ ಕೇಂದ್ರದ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿ, ಇನ್ನೂ ಹೆಚ್ಚಿನ ರೀತಿಯಲ್ಲಿ ಆಸ್ಪತ್ರೆಯನ್ನು ಉನ್ನತೀಕರಿಸುವ ಬಗ್ಗೆ ಹೆಚ್ಚಿನ ಅನುದಾನ ಮೂಲಕ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.

ಒಳರೋಗಿ ಹಾಗೂ ಹೊರರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗೆ ಸೂಚನೆ ನೀಡಿದರು.

ಕಾಪು ತಾಪಂ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಕುತ್ಯಾರು ಗ್ರಾಪಂ ಅಧ್ಯಕ್ಷೆ ಲತಾ ಆಚಾರ್ಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ವೈದ್ಯಾಧಿಕಾರಿಗಳು, ಸಿಬ್ಬಂದಿ, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24