ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ ವಿಡಿಯೋ ವೈರಲ್ ; ಪ್ರಕರಣ ದಾಖಲು, ವಾಹನ ವಶಕ್ಕೆ – vishwanews24
ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ ವಿಡಿಯೋ ವೈರಲ್ ; ವಾಹನ ವಶಕ್ಕೆ – ಪೊಲೀಸರಿಂದ ಪ್ರಕರಣ ದಾಖಲು
ಕಾಪು: ಪಿಕ್ಅಪ್ ವಾಹನದ ಹಿಂಬದಿ ಬಾಡಿಯಲ್ಲಿ ಸುಮಾರು 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಮಾನವ ಜೀವಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ವಾಹನ ಚಲಾಯಿಸಿದ ಘಟನೆಗೆ ಸಂಬಂಧಿಸಿ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಸೆ.10ರಂದು ಸಂಜೆ 7.30ರ ಸುಮಾರಿಗೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಅಂಡರ್ಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು–ಉಡುಪಿ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ KL-33-B-7463 ನೋಂದಣಿ ಸಂಖ್ಯೆಯ ಪಿಕ್ಅಪ್ ವಾಹನದ ಚಾಲಕನು ವಾಹನದ ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ, ಸುಮಾರು 8ರಿಂದ 10 ಮಕ್ಕಳನ್ನು ವಾಹನದ ಹಿಂಬದಿಯ ಬಾಡಿಯಲ್ಲಿ ನಿಲ್ಲಿಸಿಕೊಂಡು ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಪ್ರಕರಣ ದಾಖಲು – ವಾಹನ ಜಪ್ತಿ: ವಿಡಿಯೋ ಸುಳಿವು ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಕಾಪು ಪೊಲೀಸ್ ಠಾಣೆಯ ಅಧಿಕಾರಿಗಳು, ಶುಕ್ರವಾರ (ಸೆ. 11) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಲಾದ ಗೂಡ್ಸ್ ವಾಹನವನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿರುವ ಪೊಲೀಸರು, ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಿ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ – vishwanews24
