ಕಾಪು: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ ; ಐವರು ಸಾವು – vishwanews24

Featured, ಉಡುಪಿ

ಕಾಪು: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋ ಪಲ್ಟಿ ; ಐವರು ಸಾವು 

ಕಾಪು : ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ಭಾನುವಾರ ಸಂಭವಿಸಿದೆ.

ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಏರಿ ರಸ್ತೆಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಒಟ್ಟು 9 ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದರು. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply