ಕಾಪು ತಾಲೂಕು‌ಮಟ್ಟದ ಪ್ರಥಮ‌ ಕನ್ನಡ ರಾಜ್ಯೋತ್ಸವ ಆಚರಣೆ.

Featured, ಉಡುಪಿ

Kaup: ಕಾಪು ತಾಲೂಕು ಮಟ್ಟದಲ್ಲಿ ಪ್ರಪ್ರಥಮವಾಗಿ ಸರಕಾರಿ ಪ್ರಾಯೋಜತ್ವದಡಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯು ಕಾಪು ವಿದ್ಯಾನಿಕೇತನ‌ ಶಾಲಾ ವಠಾರದಿಂದ ಬಂಗ್ಲೆ ಮೈದಾನದವರೆಗೆ ಸಾಗಿ, ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ.‌ ಶೆಟ್ಟಿ, ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಪುರಸಭೆ ಸದಸ್ಯರಾದ ಅನಿಲ್ ಕುಮಾರ್‌, ಕಿರಣ್ ಆಳ್ವ, ರಮಾ ವೈ. ಶೆಟ್ಟಿ, ಶಾಂಭವಿ ಕುಲಾಲ್, ಮಮತಾ ಸಾಲ್ಯಾನ್, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಮರಾಠೆ, ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಉಪನ್ಯಾಸಕರಾದ ನಾಗರಾಜ್ ಜಿ.ಎಸ್., ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು.