ಕಾಪು: ಪಾದಚಾರಿಗೆ ಬೈಕ್‌ ಡಿಕ್ಕಿ: ಬೈಕ್‌ ಸವಾರ ಸಾವು – Vishwanews24

Featured, ಉಡುಪಿ

ಕಾಪು: ಪಾದಚಾರಿಗೆ ಬೈಕ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಸಾವು

ಕಾಪು: ಪಾದಚಾರಿಗೆ ಬೈಕ್‌ ಡಿಕ್ಕಿ ಹೊಡೆದು, ಬೈಕ್‌ ಸವಾರ ಮೃತಪಟ್ಟ ಘಟನೆ ಮೂಳೂರು ಬೊಬ್ಬರ್ಯ ದೈವಸ್ಥಾನದ ಬಳಿ ನಡೆದಿದೆ.

ಸುರೇಶ ಎಲ್. ಪುತ್ರನ್ ಮೃತಪಟ್ಟವರು. ಸ್ನೇಹಿತನೊಂದಿಗೆ ಬೈಕ್ ನಲ್ಲಿ ಉಡುಪಿಯಿಂದ ಮೂಳೂರು ಕಡೆಗೆ ಹೊರಟಿದ್ದ ವೇಳೆ ಘಟನೆ ಸಂಭವಿಸಿದೆ.

ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈರಣ್ಣ ರವರಿಗೆ ಬೈಕ್‌ ಡಿಕ್ಕಿ ಹೊಡೆದಿದೆ.. ಇದರಿಂದ ಈರಣ್ಣ ರಸ್ತೆಯ ಬದಿಗೆ ಬಿದ್ದು ಗಾಯಗೊಂಡಿದ್ದರು.

ಇದೇ ವೇಳೆ ಬೈಕ್‌ ಸಮೇತ ಸವಾರರಿಬ್ಬರು ರಸ್ತೆಗೆ ಬಿದ್ರು. ಅಪಘಾತದಲ್ಲಿ ಸುರೇಶ್‌ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಸಾಗಿಸುವ ಮಾರ್ಗ ಮಧ್ಯೆದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING ಮಂಗಳೂರು ಪಾಲಿಕೆ :ನೂತನ ಮೇಯರ್ ಜಯಾನಂದ , ಉಪ ಮೇಯರ್ ಪೂರ್ಣಿಮಾ ಆಯ್ಕೆ – Vishwanews24

Leave a Reply