ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಉಚ್ಚಿಲ ಮೂಲದ ಹಸನ್ ಯು. ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡುಬಿದಿರೆಯ ಹಲಿಮಾಬಿ ಅವರು ನೀಡಿದ ದೂರಿನಂತೆ, ಹಸನ್ ಅವರು ಬಿಲ್ಡರ್ ಸಂಸ್ಥೆಯೊಂದಿಗೆ ಸಂಬಂಧ ಹೊಂದಿರುವುದಾಗಿ ತಿಳಿಸಿ ತನ್ನ ಮಾಲಕತ್ವದಲ್ಲಿ ಮೂಳೂರು ಹೆರಿಟೇಜ್ ಅಪಾರ್ಟ್ಮೆಂಟ್ ನಿರ್ಮಾಣವಾಗುತ್ತಿದ್ದು, ಅದರ ಎರಡನೇ ಮಹಡಿಯಲ್ಲಿರುವ ಫ್ಲ್ಯಾಟ್ ಅನ್ನು 27.56 ಲಕ್ಷ ರೂ. ಗೆ ಮಾರಾಟ ಮಾಡುವುದಾಗಿ ತಿಳಿಸಿ ಹಂತ ಹಂತವಾಗಿ ಹಣ ಪಡೆದಿದ್ದರು ಎಂದು ದೂರಿ ಈ ವರೆಗೆ ಫ್ಲ್ಯಾಟ್ನ ಸ್ವಾಧೀನವನ್ನು ಹಸ್ತಾಂತರಿಸದೆ, ವಿವಿಧ ಕಾರಣಗಳನ್ನು ನೀಡಿ ವಿಳಂಬ ಮಾಡುತ್ತಾ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24
