ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶ್ರೀ ನಾರಾಯಣ ಗುರು ಜ್ಞಾನ ಮಂದಿರದ ಶಿಲಾನ್ಯಾಸ:vishwanews24
ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶ್ರೀ ನಾರಾಯಣ ಗುರು ಜ್ಞಾನ ಮಂದಿರದ ಶಿಲಾನ್ಯಾಸ:vishwanews24
Kaup: ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶ್ರೀ ನಾರಾಯಣ ಗುರು ಜ್ಞಾನ ಮಂದಿರದ ಶಿಲಾನ್ಯಾಸ ಸಮಾರಂಭವು ಜುಲೈ 3 ರಂದು ನಡೆಯಿತು.
ಶಿಲಾನ್ಯಾಸ ನೆರವೇರಿಸಿದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ಚನ ನೀಡಿದರು.
ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು ಅಧ್ಯಕ್ಷತೆ ವಹಿಸಿದ್ದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಮುಂಬಯಿ ಬಿಲ್ಲವರ ಯೂನಿಯನ್ ಅಧ್ಯಕ್ಷ ಹರೀಶ್ ಜಿ. ಅಮೀನ್, ಎಚ್.ಎಸ್.ಸಾಯಿರಾಮ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಮಹೇಶ್ ಶಾಂತಿ ಹೆಜಮಾಡಿ, ಚರಣ್ ಶಾಂತಿ ಕಟಪಾಡಿ ಉಪಸ್ಥಿತರಿದ್ದರು.


