ಕಾಪು ಬೀಡುಬದಿ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ:- vishwanews24

ಉಡುಪಿ

ಕಾಪು ಬೀಡುಬದಿ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಕಾಪು: ಇಲ್ಲಿನ ಬೀಡುಬದಿ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ನವರಾತ್ರಿಯ ಪ್ರಯುಕ್ತ ಆದಿತ್ಯವಾರ ನಡೆದ ದುರ್ಗಾಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ದೇವರ ದರುಶನ ಪಡೆದರು.
ಈ‌ ಸಂಧಲರ್ಭದಲ್ಲಿ ಕಾಪು ಪುರಸಭೆ ನಿಕಟ ಪೂರ್ವ ಅಧ್ಯಕ್ಷ ಅನಿಲ್ ಕುಮಾರ್,ಬಿಜೆಪಿ ಮುಖಂಡ ಗುರ್ಮೆ ಸುರೇಶ್ ಶೆಟ್ಟಿ,ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.