ಕಾಪು: ಮೀನುಗಾರಿಕೆಗೆ ತೆರಳಿದ್ದ ಯುವಕ ಬಲೆಯೊಳಗೆ ಸಿಲುಕಿ ಮೃತ್ಯು – vishwanews24

Featured, ಉಡುಪಿ

ಕಾಪು: ಮೀನುಗಾರಿಕೆಗೆ ತೆರಳಿದ್ದ ಯುವಕ ಬಲೆಯೊಳಗೆ ಸಿಲುಕಿ ಮೃತ್ಯು

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ.

ಪ್ರತಿದಿನ ಕಯಾಕಿಗಿಂಗ್‌ನಲ್ಲಿ ಓರ್ವನೇ ಮೀನುಗಾರಿಕೆಗೆ ತೆರಳುತ್ತಿದ್ದ ಇವರು ಇಂದು ಮುಂಜಾನೆ ಕೂಡಾ ತೆರಳಿದ್ದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ.

ಉಳ್ಳಾಲ : ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣ : ತನಿಖೆ ಚುರುಕು – ಪೊಲೀಸರಿಂದ ಇನ್ನೆರಡು ದಿನಗಳಲ್ಲಿ ಪತ್ತೆ ಹಚ್ಚುವ ಭರವಸೆ – vishwanews24

ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಮತ್ತೊಂದು ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಕಯಾಕ್ ಹಾಗು ಮೃತದೇಹವನ್ನು ತಂದಿದ್ದಾರೆ.

ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯ ಕಿರಣ್ ಆಳ್ವ, ವಿಜಯ್ ಕರ್ಕೇರ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಸ್ಥಳೀಯರಾದ ಶಿವಾಜಿ ಸುವರ್ಣ, ಬಾಲಕೃಷ್ಣ ಹಾಗೂ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ವಾರಾಂತ್ಯದ ವೇಳೆಗೆ ಬಿಡುಗಡೆ – vishwanews24

Leave a Reply