ಕಾಪು ವಿಧಾನಸಭಾ ಕ್ಷೇತ್ರ (ದಕ್ಷಿಣ)ದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಖಿಲೇಶ್ ಕೋಟ್ಯಾನ್ ನೇಮಕ – Vishwanews24

Featured, ಉಡುಪಿ

ಕಾಪು ವಿಧಾನಸಭಾ ಕ್ಷೇತ್ರ (ದಕ್ಷಿಣ)ದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಖಿಲೇಶ್ ಕೋಟ್ಯಾನ್ ನೇಮಕ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ದಕ್ಷಿಣದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಖಿಲೇಶ್ ಕೋಟ್ಯಾನ್ ಕಟಪಾಡಿ ಇವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ಕಾಪು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಹಾಗೂ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಇವರ ಶಿಫಾರಸಿನಂತೆ ಈ ನೇಮಕಾತಿಯನ್ನು ಮಾಡಿದ್ದು, ಅಖೀಲೇಶ್ ಅವರು ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ನಿಭಾಯಿಸಿದ್ದಾರೆ.

ಉಡುಪಿ ಜಿಲ್ಲಾ ಎನ್ ಎಸ್ ಯು ಐ ಅಧ್ಯಕ್ಷರಾಗಿ, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವಕ್ತಾರ, ಮೀನುಗಾರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ರಾಜ್ಯ ಘಟಕದ ಕಾರ್ಯದರ್ಶಿಯಾಗಿ, ಮುದರಂಗಡಿ ಪಂಚಾಯತ್ ವ್ಯಾಪ್ತಿಯ ಚುನಾವಣಾ ಉಸ್ತುವಾರಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

Leave a Reply