ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ – vishwanews24
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ
ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸೋಮವಾರ (ಜ.27) ಬೆಳಿಗ್ಗೆ ಚಪ್ಪರ ಮೂಹೂರ್ತ ನೆರವೇರಿಸಲಾಯಿತು.
ಕ್ಷೇತ್ರದ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ. ಕುಮಾರ ಗುರು ತಂತ್ರಿ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಉಪಸ್ಥಿತಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಇಡಿ ನೋಟಿಸ್ – vishwanews24
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಶ್ರೀ ದೇಗುಲದಲ್ಲಿ ಫೆ. 4 ರಂದು ನವದುರ್ಗಾ ಲೇಖನ ಯಜ್ಞ ಸಮರ್ಪಣಾಪೂರ್ವಕವಾಗಿ ನವಚಂಡಿಯಾಗ, ಫೆ. 9 ರಂದು ಸ್ವರ್ಣ ಗದ್ದುಗೆ, ರಜತ ರಥ ಪುರಪ್ರವೇಶ, ಫೆ. 22 ಮತ್ತು 23 ರಂದು ಬೃಹತ್ ಹೊರೆಕಾಣಿಕೆ ಸಮರ್ಪಣೆ ಹಾಗೂ ಫೆ. 25 ರಿಂದ ಮಾ. 5 ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆ ಪ್ರಯುಕ್ತ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಹಾ ಅನ್ನಸಂತರ್ಪಣೆಯ ಉದ್ದೇಶಕ್ಕಾಗಿ ಚಪ್ಪರ ಮುಹೂರ್ತ ನೆರವೇರಿಸಲಾಗಿದೆ ಎಂದರು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಕೆ. ರಘುಪತಿ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಕೆ. ರವಿಕಿರಣ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮನೋಹರ ಎಸ್. ಶೆಟ್ಟಿ, ಮಾಧವ ಆರ್. ಪಾಲನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ದಿವಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ, ಭಗವಾನ್ ದಾಸ್ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ್, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ ಕಾಪು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಗ್ರಾಮ ಸೀಮೆಯ ಭವದ್ಭಕ್ತರು ಪಾಲ್ಗೊಂಡಿದ್ದರು.
ಉಡುಪಿ: ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ – vishwanews24
