ಕಾಪುವಿನಲ್ಲಿ ವಾಜಪೇಯಿ ಅಸ್ತಿ ಕಲಶಕ್ಕೆ ನಮನ..

Featured, ಉಡುಪಿ

ಕಾಪು: ಅಟಲ್ ಬಿಹಾರಿ ವಾಜಪೇಯಿಯವರ ಚಿತಾ ಭಸ್ಮವುಳ್ಳ ಕಲಶ ಇಂದು ಕಾಪುವಿಗೆ ಆಗಮಿಸಿದ್ದು ನಗರ ಭಾಗದ ವಾಜಪೇಯಿ ಕಟ್ಟೆಯ ಬಳಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಸಂಸದೆ ಶೋಭ ಕರಂದ್ಲಾಜೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಕ್ಷೇತ್ರಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಕಾರ್ಯಕಾರಿಣಿ ಸದಸ್ಯ ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ, ಕುತ್ಯಾರು ನವೀನ್ ಶೆಟ್ಟಿ, ಜಿ.ಪಂ. ಸದಸ್ಯೆ ಗೀತಾಂಜಲಿ ಎಂ. ಸುವರ್ಣ , ಜಿಲ್ಲಾ ಬಿಜೆಪಿ ವಕ್ತಾರ ಕಟಪಾಡಿ ಶಂಕರ ಪೂಜಾರಿ, ಕಾಪು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕೇಸರಿ ಎಂ. , ಕಾಪು ಮಹಿಳಾ ಮೋರ್ಚಾ ಕಾರ್ಯದರ್ಶಿ ಸುಮಾ ಶೆಟ್ಟಿ, ಪೂರ್ಣಿಮ ಚಂದ್ರಶೇಖರ್ ಸೇರಿದಂತೆ ನೂರಾರು ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸಿದರು.