ಕಾರ್ಕಳ : ಉದ್ಯಮಿ ಆತ್ಮಹತ್ಯೆ – vishwanews24
ಕಾರ್ಕಳ: ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಉದ್ಯಮಿ ದಿಲೀಪ್ ಎನ್.ಆರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ.
ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆರ್. ಎಂದು ಗುರುತಿಸಲಾಗಿದೆ.
ದಿಲೀಪ್ ಕಾರ್ಕಳ ತೆಳ್ಳಾರು ರಸ್ತೆ ನಿವಾಸಿಯಾಗಿದ್ದು, ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಂಗಳೂರು, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ಹೋಟೆಲ್ ಉದ್ಯಮ ನಡೆಸಿದ್ದರು. ಇವರು ಉದ್ಯಮದಲ್ಲಿ ನಷ್ಟವನ್ನು ಕೂಡ ಅನುಭವಿಸಿದ್ದು, ಕಾಯಿಲೆ ಉಲ್ಬಣಗಳ್ಳುತ್ತಿರುವ ಹಿನ್ನಲೆಯಲ್ಲಿ ಮಾನಸಿಕವಾಗಿ ತುಂಬಾ ನೊಂದಿದ್ದರು ಎನ್ನಲಾಗಿದೆ.
