ಕಾರ್ಕಳ :ಕಾರು ಹಾಗೂ ಬೈಕ್ ಅಪಘಾತ ; ಸವಾರ ಸಾವು – vishwanews24
ಕಾರ್ಕಳ :ಕಾರು ಹಾಗೂ ಬೈಕ್ ಅಪಘಾತ ; ಸವಾರ ಸಾವು
ಕಾರ್ಕಳ : ನೀರೆ ಹೆದ್ದಾರಿ ಶಾಲಾ ಬಳಿ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ, ಕಾಂಗ್ರೆಸ್ ಮುಖಂಡ, ನೀರೆ ನಿವಾಸಿ ಶಂಕರ್ ಶೆಟ್ಟಿ (70) ಸಾವಿಗೀಡಾದ ಘಟನೆ ಡಿ. 5ರಂದು ಸಂಭವಿಸಿದೆ.
ಬೈಲೂರು ಪ್ರೌಢಶಾಲಾ ಶಿಕ್ಷಕ ಹರೀಶ್ ಶೆಟ್ಟಿ ಎಂಬವರು ತಮ್ಮ ಕಾರಿನಲ್ಲಿ ನೀರೆ ಹೆದ್ದಾರಿ ಶಾಲಾ ಕ್ರಾಸ್ ಬಳಿ ಸಾಗುತ್ತಿದ್ದಾಗ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಶಂಕರ್ ಶೆಟ್ಟಿ ಅವರಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆ ಸಾಗಿಸಲಾಯಿತಾದರೂ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ ; ಪ್ರಯಾಣದ ವಿವರ ಹೀಗಿದೆ – vishwanews24
ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಶಂಕರ್ ಶೆಟ್ಟಿ ಅವರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ಬ್ರಹ್ಮ ಬೈದೆರ್ಕಳ ಗರಡಿ ನೀರೆ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
