ಕಾರ್ಕಳ: ಪರಶುರಾಮ ಥೀಮ್ ಪಾರ್ಕಿನಲ್ಲಿ ವ್ಯತ್ಯಾಸ ಆಗಿದ್ದರೆ ತನಿಖೆ ಮಾಡಲಿ, ನಾನು ಬೆಂಬಲ ನೀಡುತ್ತೇನೆ : ಸುನಿಲ್ ಕುಮಾರ್ – Vishwanews24
ಕಾರ್ಕಳ: ಪರಶುರಾಮ ಥೀಮ್ ಪಾರ್ಕಿನಲ್ಲಿ ವ್ಯತ್ಯಾಸ ಆಗಿದ್ದರೆ ತನಿಖೆ ಮಾಡಲಿ, ನಾನು ಬೆಂಬಲ ನೀಡುತ್ತೇನೆ : ಸುನಿಲ್ ಕುಮಾರ್
ಕಾರ್ಕಳ: ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕಿನಲ್ಲಿ ಯಾವುದೇ ವ್ಯತ್ಯಾಸಗಳಾಗಿದ್ದರೆ ಜಿಲ್ಲಾಡಳಿತ ಯಾವುದೇ ರೀತಿಯ ತನಿಖೆಯನ್ನು ಮಾಡಲಿ, ನಾನು ಬೆಂಬಲ ನೀಡುತ್ತೇನೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಪರಶುರಾಮ ಥೀಂ ಪಾರ್ಕಿಗೂ ಬರುವಂತಾಗಬೇಕು. ಕಾರ್ಕಳ ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿ ಗೊಂಡು ಆರ್ಥಿಕತೆ ಬೆಳೆಯಬೇಕು ಎಂಬ ಕಾರಣಕ್ಕಾಗಿ ಪರಶುರಾಮ ಥೀಂ ಪಾರ್ಕ್ ತರುವ ಪ್ರಯತ್ನ ನಡೆಸಲಾಗಿದೆ. ಆದರೆ ಅಭಿವೃದ್ಧಿ ಸಹಿಸದ ಕೆಲವರು ಇತ್ತೀಚೆಗೆ ಅನವಶ್ಯಕ ಆರೋಪ ಮಾಡುತ್ತಿದ್ದಾರೆ ಎಂದರು.
ಮಂಗಳೂರು: ಮೋತಿ ಮಹಲ್ ಹೋಟೆಲ್ ಸ್ವಿಮ್ಮಿಂಗ್ ಪೂಲ್ನಲ್ಲಿ ಕೇರಳದ ಬ್ಯಾಂಕ್ ಅಧಿಕಾರಿ ಮೃತದೇಹ ಪತ್ತೆ – Vishwanews24
