ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ :  ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ – vishwanews24

Featured, ಉಡುಪಿ

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ :  ಪತ್ನಿ ಪ್ರತಿಮಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಕೆ

ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪ್ರತಿಮಾಗೆ ಜಾಮೀನು ನೀಡುವುದಕ್ಕೆ ಸರಕಾರಿ ಅಭಿಯೋಜಕರು ಸೋಮವಾರ ಆಕ್ಷೇಪಣೆ ಸಲ್ಲಿಸಿದ್ದು, ಅದರ ವಿಚಾರಣೆ ಮಾ. 11ರಂದು ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಸಂಚಾರಿ ಪೀಠದಲ್ಲಿ ನಡೆಯಲಿದೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪ ಸಲ್ಲಿಸಿದ್ದರು. ಅದರ ಕುರಿತಂತೆ ವಿಚಾರಣೆ ನಡೆದ ಬಳಿಕ ಜಾಮೀನು ನೀಡಬೇಕೋ ? ಅಥವಾ ಬೇಡವೋ ಅನ್ನುವುದನ್ನು ನ್ಯಾಯಾಧೀಶರು ನಿರ್ಧರಿಸಲಿದ್ದಾರೆ.

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಇದಕ್ಕೂ ಮೊದಲು ಪ್ರಕರಣದ ಮತ್ತೋರ್ವ ಆರೋಪಿ ದಿಲೀಪ್‌ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಘಟನೆ ಹಿನ್ನೆಲೆ: ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯ ನಿವಾಸಿ ಬಾಲಕೃಷ್ಣ ಪೂಜಾರಿ ಅವರನ್ನು 2024ರ ಅ. 20ರಂದು ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣ ಸಂಬಂಧ ಅ. 25ರಂದು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದರು.

Leave a Reply