ಕಾರ್ಕಳ: ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ : ನ. 1ರಂದು ಅಟ್ಟಳಿಗೆ ಮುಹೂರ್ತ – vishwanews24 https://wp.me/p9KQap-v49
ಕಾರ್ಕಳ: ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ : ನ. 1ರಂದು ಅಟ್ಟಳಿಗೆ ಮುಹೂರ್ತ
ಸ್ವಾಮಿಯ ಸನ್ನಿಧಿಯಲ್ಲಿ ಬೆಳಗ್ಗೆ 7.30ರಿಂದ ಪಾದಾಭಿಷೇಕ..
ಕಾರ್ಕಳ: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಪ್ರಯುಕ್ತ ಅಟ್ಟಳಿಗೆ ಮುಹೂರ್ತ ನ. 1ರಂದು ಬೆಳಗ್ಗೆ 8.35ರಿಂದ 8.55ರ ಮುಹೂರ್ತದಲ್ಲಿ ನಡೆಯಲಿದೆ.
ಕಾರ್ಕಳದ ದಾನಶಾಲೆಯಲ್ಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಸನ್ನಿಧಿಯಲ್ಲಿ ಬೆಳಗ್ಗೆ 7.30ರಿಂದ ಪಾದಾಭಿಷೇಕ ನೆರವೇರಲಿದೆ. ಅ. 31ರಂದು ಬೆಳಗ್ಗೆ 8ರಿಂದ ಭಕ್ತಾಮರ ಆರಾಧನೆ ನಡೆಯಲಿದೆ.
ಇಂದಿನಿಂದ 13 ದಿನ ಹಾಸನಾಂಬೆ ಜಾತ್ರೆ: ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ – vishwanews24
ಏಲಾಚಾರ್ಯ ಮುನಿಶ್ರೀ ಪ್ರಸಂಗಸಾಗರ ಮಹಾರಾಜರ ಸಾನ್ನಿಧ್ಯದಲ್ಲಿ, ಕಾರ್ಕಳ ಜೈನ ಮಠದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ ಸೊಂದಾ ಜೈನ ಮಠದ ಅಕಲಂಕಕೇಸರಿ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಮಹಾಮಸ್ತಕಾಭಿಷೇಕ ಸಮಿತಿ ಅಧ್ಯಕ್ಷರಾದ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ, ಸಮಿತಿ ಕಾರ್ಯಾಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿ ಪ್ರಕಟನೆ ತಿಳಿಸಿದೆ.
ಉಡುಪಿ: ಬಾಡಿಗೆ ಮನೆಯ ಹಣದ ವಿವಾದ : ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ ; ಆರೋಪಿ ಬಂಧನ – vishwanews24
