ಕಾರ್ಕಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24
ಕಾರ್ಕಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾರ್ಕಳ ತಾಲ್ಲೂಕಿಗೆ ಆಗಮಿಸಿದ್ದು, ವಿವಿಧ ಇಲಾಖೆಗಳ ಅಡಿಯಲ್ಲಿ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕಾರ್ಕಳದ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ಗೆ ಮುಖ್ಯಮಂತ್ರಿಗಳ ಆಗಮನವಾಗಿದ್ದು, ಈ ಸಂದರ್ಭದಲ್ಲಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಲಕ್ಷ್ಮೀ ಹೆಬ್ಬಾಳರ್ ಮತ್ತು ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿಗಳ ಜೊತೆಗಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕಾಬೆಟ್ಟಿನಲ್ಲಿ ನಿರ್ಮಿಸಲಾಗಿರುವ ನೂತನ ‘ಡಾ. ಬಿ.ಆರ್. ಅಂಬೇಡ್ಕರ್ ಭವನ’ವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕುಕ್ಕುಂದೂರಿನ ಕಿಸಾನ್ ಸಭಾ ಟ್ರಸ್ಟ್ನ ಮಹಾತ್ಮಾಗಾಂಧಿ ವಸತಿ ಪ್ರೌಢಶಾಲೆಯ ‘ಕಿಸಾನ್ ಸಭಾ ಸಭಾಂಗಣ’ವನ್ನು ಲೋಕಾರ್ಪಣೆಗೊಳಿಸಿ, ಶಾಲೆಯ 35ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ : 👇
ಸಾರ್ವಜನಿಕ ಕಾರ್ಯಕ್ರಮಗಳ ನಂತರ ಮುಖ್ಯಮಂತ್ರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
